TSK

TSK · ಧರ್ಮೋಪದೇಶಕಾಂಡ 2:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.

ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಸಂಪೂರ್ಣವಾಗಿ ನಾಶಮಾಡಿದೆವು.

ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.

ಪಟ್ಟಣದಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ, ಹುಡುಗರನ್ನೂ, ಮುದುಕರನ್ನೂ, ದನ, ಕುರಿ ಕತ್ತೆಗಳನ್ನೂ ಸಂಪೂರ್ಣವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.

ಆ ದಿನ ಆಯಿ ಎಂಬ ಊರಿನಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ ಮಂದಿ.

ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.

¶ ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.

ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.