TSK

TSK · ಧರ್ಮೋಪದೇಶಕಾಂಡ 2:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು.

¶ ಯೊರ್ದನ್ ನದಿಯ ಆಚೆ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಯದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರೆಲ್ಲರಿಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು.

¶ ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.

ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು.ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.