ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.
TSK
TSK · ಧರ್ಮೋಪದೇಶಕಾಂಡ 20:3
Treasury of Scripture Knowledge references in ಕನ್ನಡ IRV.
ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.
ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?
ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ಆತನು ಅವರಿಗೆ, ‹“ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?”› ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.
‹ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.›
¶ ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,
ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; ‹“ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,›
ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.
ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.