TSK

TSK · ಧರ್ಮೋಪದೇಶಕಾಂಡ 20:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.

ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.

¶ ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.

ಯೇಸು ಅವನಿಗೆ, ‹“ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ”› ಎಂದು ಹೇಳಿದನು.

ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.