TSK

TSK · ಧರ್ಮೋಪದೇಶಕಾಂಡ 21:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.

ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.

ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.