TSK

TSK · ಧರ್ಮೋಪದೇಶಕಾಂಡ 22:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.

ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು.

ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.