ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.
TSK
TSK · ಧರ್ಮೋಪದೇಶಕಾಂಡ 28:16
Treasury of Scripture Knowledge references in ಕನ್ನಡ IRV.
ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.
ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು.
(ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವುದು. ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು.
ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.
ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.
ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.
ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ.
ಯೌವನದ ಪತಿಗಾಗಿ ದುಃಖದಿಂದ ಗೋಣಿತಟ್ಟನ್ನು ಧರಿಸಿಕೊಂಡು ಗೋಳಾಡುವ ಕನ್ಯೆಯಂತೆ ಗೋಳಾಡಿರಿ.
¶ “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.
ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.
ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”