TSK

TSK · ಧರ್ಮೋಪದೇಶಕಾಂಡ 28:38

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದಿಳಿದು ಐಗುಪ್ತ ದೇಶದ ಎಲ್ಲಾ ಕಡೆಯಲ್ಲಿಯೂ ಅಪರಿಮಿತವಾಗಿ ಮುತ್ತಿಕೊಂಡವು. ಅಂಥ ಮಿಡತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲು ಸಾಧ್ಯವಿಲ್ಲ.

ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.

ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.

¶ ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು.

ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”