¶ ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ.
TSK
TSK · ಧರ್ಮೋಪದೇಶಕಾಂಡ 28:43
Treasury of Scripture Knowledge references in ಕನ್ನಡ IRV.
¶ ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.
ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.
ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ?” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ” ಅಂದನು.
ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.
ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.
ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.