ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ ಮತ್ತು ಅವರನ್ನು ಕತ್ತಿಯಿಂದ ಸಂಹರಿಸುವಿರಿ.
TSK
TSK · ಧರ್ಮೋಪದೇಶಕಾಂಡ 28:7
Treasury of Scripture Knowledge references in ಕನ್ನಡ IRV.
ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?
ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.
ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.
ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು. ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.
¶ ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.
ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.
ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು.