TSK

TSK · ಧರ್ಮೋಪದೇಶಕಾಂಡ 3:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.

ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ.

ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.

¶ ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.

ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.

ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.