TSK

TSK · ಧರ್ಮೋಪದೇಶಕಾಂಡ 3:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.

ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.

¶ ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.

¶ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ವಾಸಿಸುವ ಎಲ್ಲಾ ದಿನಗಳಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ:

ಮನೆಗಳಲ್ಲಿಯೂ ವಾಸವಾಗಿರುವಾಗ, ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.

¶ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು.

ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.

¶ ಬಳಿಕ ಯೆಹೋಶುವನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ

ರೂಬೇನ್ಯರೂ, ಗಾದ್ಯರೂ, ಮನಸ್ಸೆ ಕುಲದ ಅರ್ಧ ಗೋತ್ರದವರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ದರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.

“ನೀವು ಯೆಹೋವನ ಸೇವಕನಾದ ಮೋಶೆಯ ಆಜ್ಞೆಗಳೆಲ್ಲವನ್ನು ಕೈಕೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ್ದೀರಿ.

ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.