¶ ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.
TSK
TSK · ಧರ್ಮೋಪದೇಶಕಾಂಡ 30:3
Treasury of Scripture Knowledge references in ಕನ್ನಡ IRV.
ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.
ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,
ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.
ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.
ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.
‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.
ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.
¶ “ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,
ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.
ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.