TSK

TSK · ಧರ್ಮೋಪದೇಶಕಾಂಡ 30:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.

ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.

¶ ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”

ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.

ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”

ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.

ಪ್ರವಾಹವು ನನ್ನನ್ನು ಮುಣುಗಿಸಿತು; ಆಗ ಸತ್ತೆನು ಅಂದುಕೊಂಡೆನು.

‘ಕರ್ತನಾದ ಯೆಹೋವನ ಮಾತನ್ನು ಕೇಳು’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, “ಅಹಾ!” ಎಂದು ಹಿಗ್ಗಿಕೊಂಡೆ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”

ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.

ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.

¶ ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.