ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.
TSK
TSK · ಧರ್ಮೋಪದೇಶಕಾಂಡ 30:9
Treasury of Scripture Knowledge references in ಕನ್ನಡ IRV.
ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.
¶ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು.
ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.
ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.
ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”
ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.
‹ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.›