TSK

TSK · ಧರ್ಮೋಪದೇಶಕಾಂಡ 31:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸಮೂಹದವರೆಲ್ಲರ ಮುಂದೆ ನಿಲ್ಲಿಸಿ ಅವನ ಮೇಲೆ ಕೈಯಿಟ್ಟು ಅವರ ಎದುರಿನಲ್ಲೇ ಅಧಿಕಾರವನ್ನು ಕೊಡಬೇಕು.

ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.

ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.

ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.

ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.

“ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.

ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”

¶ ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.