TSK

TSK · ಧರ್ಮೋಪದೇಶಕಾಂಡ 32:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.

ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.

ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.

ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.

ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’” ಎಂದು ಹೇಳುವರು.