TSK

TSK · ಧರ್ಮೋಪದೇಶಕಾಂಡ 32:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.

ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.

ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.

ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ,

ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.

ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?

¶ ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.

ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”