TSK

TSK · ಧರ್ಮೋಪದೇಶಕಾಂಡ 32:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.

ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.

ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.

ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.

ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು.

ಭೂಮಿಯು ಒಡೆದೇ ಇದೆ, ಬಿರಿದಿದೆ, ಕದಲಿಯೇ ಹೋಗಿದೆ.

ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.

ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.

ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.

ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು, ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ, ಸುತ್ತಮುತ್ತಲು ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿಬಿಟ್ಟಿದ್ದಾನೆ.

ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.

ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ, ಊದಲು ನೀವು ಅದರೊಳಗೆ ಕರಗಿ ಹೋಗುವಿರಿ.

ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.

ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.

ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!

¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.

‹ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.›

‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›