ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.
TSK
TSK · ಧರ್ಮೋಪದೇಶಕಾಂಡ 32:23
Treasury of Scripture Knowledge references in ಕನ್ನಡ IRV.
ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಯೆಹೋವನು ಅವನನ್ನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಪ್ರತ್ಯೇಕಿಸಿ ದಂಡಿಸುವನು.
ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.
ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ.
ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.
ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!