TSK

TSK · ಧರ್ಮೋಪದೇಶಕಾಂಡ 32:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.

ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.

ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.

ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ, ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.

ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.

ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.

ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.

ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ.

¶ “ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,

¶ ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.

ರೋಗಗಳು ಆತನಿಂದ ದೂರ ಓಡಿ ಹೋಗಿವೆ, ವ್ಯಾಧಿಯು ಆತನ ಹಿಂದೆ ಅಡಗಿಕೊಂಡಿದೆ.