TSK

TSK · ಧರ್ಮೋಪದೇಶಕಾಂಡ 32:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.

ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.

ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.

ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.

ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.”

ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.

ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ. ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.

ನೀನು ತಿಂದರೂ ನಿನಗೆ ತೃಪ್ತಿಯಾಗದು. ಹಸಿವೆಯು ನಿನ್ನೊಳಗೆ ಇದ್ದೇ ಇರುವುದು. ನೀನು ನಿನ್ನವರನ್ನು ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ. ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು.