ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
TSK
TSK · ಧರ್ಮೋಪದೇಶಕಾಂಡ 32:35
Treasury of Scripture Knowledge references in ಕನ್ನಡ IRV.
ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!
ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.
ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.
ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.
ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ.
¶ ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.
ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.
ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.