TSK

TSK · ಧರ್ಮೋಪದೇಶಕಾಂಡ 32:42

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರುದ್ಧವಾಗಿ ಪ್ರಯೋಗಿಸುವೆನು.

ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.

ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ. ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವುದು” ಎಂದು ನುಡಿದನು.

ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,

ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.

ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.