¶ ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
TSK
TSK · ಧರ್ಮೋಪದೇಶಕಾಂಡ 32:46
Treasury of Scripture Knowledge references in ಕನ್ನಡ IRV.
¶ ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.
ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.
ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
ಲೂಕನು 9:44
TSK
¶ ‹“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು”› ಎಂದು ಹೇಳಿದನು.