TSK

TSK · ಧರ್ಮೋಪದೇಶಕಾಂಡ 32:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.

¶ ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.

ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.

ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದನ್ನು ಮರೆಮಾಡದೆ ಪ್ರಕಟಿಸಿದ್ದಾರೆ.

ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.

ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.

ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.

ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.

ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.