ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.
TSK
TSK · ಧರ್ಮೋಪದೇಶಕಾಂಡ 33:12
Treasury of Scripture Knowledge references in ಕನ್ನಡ IRV.
ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;
¶ ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.
¶ ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ “ಸೊಲೊಮೋನನು” ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು.
¶ ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.
ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.
ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.
¶ ‹“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!›‹ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.›