TSK

TSK · ಧರ್ಮೋಪದೇಶಕಾಂಡ 33:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.

ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?

ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.

ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.

ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.

ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.

ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ.

ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;

ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?

ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.

ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.

ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.

ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.

ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ನಾನು ಬೆಟ್ಟ ಗುಡ್ಡಗಳಲ್ಲಿ ಓಡಾಡುವಂತೆ ಮಾಡುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.

ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.