ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.
TSK
TSK · ಧರ್ಮೋಪದೇಶಕಾಂಡ 4:1
Treasury of Scripture Knowledge references in ಕನ್ನಡ IRV.
ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು’” ಎಂದು ಹೇಳಿದನು.
¶ “ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.
ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?
ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.
ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.
ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು.
¶ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
¶ ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.
ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು.
ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.
ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ!
¶ ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.
ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.
ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.
‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.
‹ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.›