TSK

TSK · ಧರ್ಮೋಪದೇಶಕಾಂಡ 4:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.

¶ ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.

ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.

ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.

ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,

ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.

ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.

ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.

ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.