ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.
TSK
TSK · ಧರ್ಮೋಪದೇಶಕಾಂಡ 5:32
Treasury of Scripture Knowledge references in ಕನ್ನಡ IRV.
ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು.
¶ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
¶ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.
ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.
ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು.
ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
ಇಸ್ರಾಯೇಲರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಧರ್ಮಶಾಸ್ತ್ರದ ನಿಯಮ ನಿಬಂಧನೆಗಳನ್ನು ಅನುಸರಿಸಿ, ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿಯೂ, ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ, ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲ ಇರುವಂತೆ ಮಾಡುವೆನು, ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲಾದ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.
ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.
ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.
ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.
ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನಡೆಯಿರಿ.
ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.