TSK

TSK · ಧರ್ಮೋಪದೇಶಕಾಂಡ 6:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.

ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.

¶ ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ,