TSK

TSK · ಧರ್ಮೋಪದೇಶಕಾಂಡ 6:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.

ನಿಮ್ಮ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲಿಯೂ ಮತ್ತು ಹೆಬ್ಬಾಗಿಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು.

ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.

ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು, “ನಿನಗಾದ ದರ್ಶನವನ್ನು ಬರೆದಿಡು; ಓದುವವರು ಸುಲಭವಾಗಿ ಶೀಘ್ರವಾಗಿ ಓದಲು ಅನುಕೂಲವಾಗುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತಿಡು!