TSK

TSK · ಧರ್ಮೋಪದೇಶಕಾಂಡ 7:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು.

ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ. ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ.

ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.

ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು.

¶ ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.

¶ ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.

ಆತನು ತಾನೇ ನಿಮ್ಮ ಶತ್ರುಗಳನ್ನು ನಿಮ್ಮ ಎದುರಿನಿಂದ ಹೊರಡಿಸುವೆನೆಂದು ಮಾತುಕೊಟ್ಟನಲ್ಲವೇ.

¶ ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.

¶ ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.

¶ ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.

ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.

ಇದಲ್ಲದೆ ಇಸ್ರಾಯೇಲರಿಂದ ಸಂಹೃತರಾಗದೆ, ಕಾನಾನ್ ದೇಶದಲ್ಲಿ ಉಳಿದಿದ್ದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ, ಯೆಬೂಸಿಯ,

ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.

ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.