ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.
TSK
TSK · ಧರ್ಮೋಪದೇಶಕಾಂಡ 7:13
Treasury of Scripture Knowledge references in ಕನ್ನಡ IRV.
¶ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.
ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.
¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:
ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.
ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.
ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.
ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.
ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.
‹ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು”› ಎಂದು ಹೇಳಿದನು.
‹ನೀವು ನನ್ನನ್ನು ಪ್ರೀತಿಸಿ›‹ನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ›‹ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.›