TSK

TSK · ಧರ್ಮೋಪದೇಶಕಾಂಡ 7:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.

ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.

ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.

‘ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ’ ಅಂದುಕೊಳ್ಳುತ್ತೀರೋ?

ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಜನಾಂಗಗಳಿಗೆ ಮಾಡಿದೆಲ್ಲವನ್ನೂ ನೀವೆಲ್ಲರೂ ನೋಡಿದ್ದೀರಷ್ಟೇ. ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ.

“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.

“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.