TSK

TSK · ಧರ್ಮೋಪದೇಶಕಾಂಡ 7:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.

ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.

ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.

¶ ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು.

ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ.

ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.

ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.

ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.

ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.

ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು.

ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.

ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.

¶ ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.

ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.

ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.

ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು.

ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?

ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.