TSK

TSK · ಧರ್ಮೋಪದೇಶಕಾಂಡ 7:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.

ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.

¶ ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.

¶ ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.

ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು.

ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.

ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.