TSK

TSK · ಧರ್ಮೋಪದೇಶಕಾಂಡ 8:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.

“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.

ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ;

ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.

ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ.

ಯೇಸು, ‹“‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” › ಅಂದನು.

‹ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.›

ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.