TSK

TSK · ಧರ್ಮೋಪದೇಶಕಾಂಡ 9:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.

ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.

ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.

ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.

ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?

ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು.

¶ ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.