TSK

TSK · ಧರ್ಮೋಪದೇಶಕಾಂಡ 9:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

¶ ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.

ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.

ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.

¶ “‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.

ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.

¶ ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ.

ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.

¶ “ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;

ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,