ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ
TSK
TSK · ಪ್ರಸಂಗಿ 1:2
Treasury of Scripture Knowledge references in ಕನ್ನಡ IRV.
ಮನುಷ್ಯನು ಬರೀ ಉಸಿರೇ, ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.
ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.
¶ ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.
ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.
ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
¶ ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ.
ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?
ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.
ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,