TSK

TSK · ಪ್ರಸಂಗಿ 1:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.

¶ ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?

ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು.

ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?

¶ ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?

ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.

ಅವರು ಸತ್ತಾಗಲೇ ಅವರ ಪ್ರೀತಿಯೂ, ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ. ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲು ಇಲ್ಲ.

ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.

ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’

‹ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?›