TSK

TSK · ಪ್ರಸಂಗಿ 11:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು.

ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.

ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.

ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.

ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.

ಯೇಸು ಅವನಿಗೆ, ‹“ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.›

‹ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು”› ಎಂದು ಹೇಳಿದನು.

¶ ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.

ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.