ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
TSK
TSK · ಪ್ರಸಂಗಿ 12:7
Treasury of Scripture Knowledge references in ಕನ್ನಡ IRV.
ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
ಧೂಳಿನಲ್ಲಿರುವ ಅಸ್ತಿವಾರದ ಮೇಲೆ, ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.
ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.
ಸಮಸ್ತ ಜನರು ಒಟ್ಟಾಗಿ ಅಳಿದುಹೋಗುವರು, ಪುನಃ ಮನುಷ್ಯರು ಧೂಳೇ ಆಗುವರು.
“ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.
ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು. ಎಲ್ಲವು ಮಣ್ಣಿನಿಂದಾದವು. ಎಲ್ಲವೂ ಮಣ್ಣಿಗೆ ಪುನಃ ಸೇರುವವು.
ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ” ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು.
¶ ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,
ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,