TSK

TSK · ಪ್ರಸಂಗಿ 2:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.

ಅವನು, “ನಾನು ಕದಲುವುದೇ ಇಲ್ಲ; ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ.

“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.

¶ ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.

ಆಗ ನಾನು ನನ್ನ ಹೃದಯದಲ್ಲಿ, “ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.

ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು.

ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.

ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.

ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.”

¶ ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.›

ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.

ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.