TSK

TSK · ಪ್ರಸಂಗಿ 2:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು,

¶ ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು.

ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳು, ಅವುಗಳ ಹತ್ತಿರ ಎರಡು ಸಿಂಹಗಳು ಇದ್ದವು.

ದ್ರಾಕ್ಷಿ ತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ,

ಬಾಲಾತೊರು ಮತ್ತು ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣಗಳನ್ನೂ, ರಾಹುತರ ಪಟ್ಟಣಗಳನ್ನೂ ಸೊಲೊಮೋನನು ಕಟ್ಟಿಸಿದನು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.

ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.

ನನ್ನ ಪಾಲಿಗೆ ನನ್ನ ನಲ್ಲನು ಏನ್ಗೆದಿಯ ದ್ರಾಕ್ಷಿ ತೋಟಗಳ ಗೋರಂಟೆಯ ಹೂಗೊಂಚಲು.

ಸೊಲೊಮೋನನು ಬಾಲ್ಹಾಮೋನಿನಲ್ಲಿ ಇದ್ದ ತನ್ನ ದ್ರಾಕ್ಷಿ ತೋಟವನ್ನು ಗುತ್ತಿಗೆಗೆ ಕೊಟ್ಟನು, ಪ್ರತಿಯೊಬ್ಬ ಗುತ್ತಿಗೆದಾರ ತೆರಬೇಕಾಗಿತ್ತು ಸಾವಿರ ಬೆಳ್ಳಿ ನಾಣ್ಯಗಳನ್ನು.

“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.