TSK

TSK · ಪ್ರಸಂಗಿ 3:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?

“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.

¶ ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.

¶ ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.

ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.

ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.

“ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?” ಅಂದನು.