ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.
TSK
TSK · ಪ್ರಸಂಗಿ 3:2
Treasury of Scripture Knowledge references in ಕನ್ನಡ IRV.
¶ ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.
¶ ಯೆಹೋವನು ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.
¶ ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.
ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.
ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ.
ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.
ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!
ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.
¶ ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.
“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.
ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ,
‹ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.›
ಅದಕ್ಕೆ ಆತನು ‹“ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.›
ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.
ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
¶ “ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.