ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
TSK
TSK · ಪ್ರಸಂಗಿ 3:20
Treasury of Scripture Knowledge references in ಕನ್ನಡ IRV.
ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.
ನೀನು ನನ್ನನ್ನು ಜೇಡಿಮಣ್ಣಿನಿಂದಲೇ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರುಗಿ ಮಣ್ಣಾಗುವಂತೆ ಮಾಡುವೆಯಾ?
ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.
ಆದರೂ ನಾಶಕ್ಕೆ ಒಳಗಾದವನು ಕೈಚಾಚುವುದಿಲ್ಲವೋ? ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವುದಿಲ್ಲವೋ?
ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.
¶ ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ, ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ ಯಾರಿಗೆ ಗೊತ್ತು?
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.
ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.